Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳು ಮತ್ತು ಸದಸ್ಯರುಗಳ ಭೆಟ್ಟಿ
Date : 06-11-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-06.11.2025 ರಂದು ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳಾದ ಸನ್ಮಾನ್ಯ ಶ್ರೀ ರುದ್ರಪ್ಪ ಲಮಾಣಿ ಮತ್ತು ವಿಧಾನ ಸಭಾ ಸದಸ್ಯರುಗಳಾದÀ ಸನ್ಮಾನ್ಯ ಶ್ರೀ ಸುರೇಶಕುಮಾರ, ಎ.ಮಂಜು, ಪ್ರಿಯಾಕೃಷ್ಣಾ, ಎಸ್.ಮುನಿರಾಜು, ಎಸ್.ಟಿ. ಸೋಮಶೇಖರ, ಸಿ.ಎನ್.ಬಾಲಕೃಷ್ಣ, ಡಾ|| ಅವಿನಾಶ ಜಾದವ, ಹೆಚ್.ಡಿ.ತಮ್ಮಯ್ಯ, ಶ್ರೀ ಮಹೇಶ ಟೆಂಗಿನಕಾಯಿ, ಆನಂದ ಕೆ.ಎಸ್., ಮತ್ತು ಧಾರವಾಡ ಜಿಲ್ಲಾಧಿಕಾರಿಗಳಾದ ಶ್ರೀಮತಿ ದಿವ್ಯಪ್ರಭು ಜೆ.ಆರ್.ಜೆ, ಆಯ್.ಎ.ಎಸ್. ಅಧಿಕಾರಿಯಾದ ಪ್ರಭುಲಿಂಗ ಕವಳಿಕಟ್ಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಸಂತೋಷಕುಮಾರ ಬಿರಾದಾರ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಮಣ್ಣೂರು, ಶ್ರೀ ಉದಯಕುಮಾರ ಡಿ.ನಾಯ್ಕ ಮತ್ತು ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು