ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಐ.ಪಿ.ಎಸ್. ಇವರ ಭೆಟ್ಟಿ
Date : 01-12-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-01.12.2025 ರಂದು ಹೈದ್ರಾಬಾದ ಪೊಲೀಸ್ ಆಯುಕ್ತರಾದ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನವರ, ಐ.ಪಿ.ಎಸ್., ಇವರು ಶ್ರೀಮಠಕ್ಕೆ ಕುಟುಂಬ ಸಮೇತರಾಗಿ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಇವರು ಶ್ರೀಮಠಕ್ಕೆ ೧೦೦ ಸೌಂದರೀಕರಣದ ಗಿಡಗಳ ಕುಂಡಲಿಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸದರಿ ಕುಂಡಲಿಗಳಿಗೆ ನೀರು ಹಾಕುವ ಮುಖಾಂತರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮಠದ ಮ್ಯಾನೇಜರ್‌ರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು