ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಶಾಕೀರ ಸನದಿ ಇವರ ಭೆಟ್ಟಿ
Date : 09-12-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.12.2025 ರಂದು ಸನ್ಮಾನ್ಯ ಶ್ರೀ ಶಾಕೀರ ಸನದಿ, ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ 100 ವರ್ಷಗಳ ಪುರಾತನ ಶ್ರೀಮಠದ ಕೆರೆಯನ್ನು ಅಂದಾಜು 4 ಕೋಟಿ ರೂಗಳಲ್ಲಿ ಸೌಂದರೀಕರಣದೊAದಿಗೆ ಅಭಿವೃದ್ಧಿಪಡಿಸಬೇಕೆಂದು ಟ್ರಸ್ಟ್ ಕಮೀಟಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಅಧ್ಯಕ್ಷರು ಪ್ರಾಧಿಕಾರದ ಅನುದಾನದಲ್ಲಿ ಅಭಿವೃದ್ಧಿಪಡಿಸುವುದಾಗಿ ಭರವಸೆಯನ್ನು ನೀಡಿದರು ಈ ಸಮಯದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ ಮತ್ತು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು