ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರ ಭೆಟ್ಟಿ
Date : 21-12-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-21.12.2025 ರಂದು ಬೆಳಗಾವಿ ಲೋಕ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಸಿದ್ಧನಗೌಡ ಪಿ. ಪಾಟೀಲ, ಶ್ರೀ ವಸಂತ ವಾಯ್. ಸಾಲಗಟ್ಟಿ, ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು