Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಮಹಾಸ್ವಾಮಿಯವರ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೀದಿ ನಾಟಕ.
Date : 01-11-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ:-01.11.2025 ರಂದು ಶ್ರೀಮಠದ ಆವರಣದಲ್ಲಿ ಸ್ವಚ್ಚತೆ, ಶೌಚಾಲಯ, ಹೆಣ್ಣುಮಕ್ಕಳ ವರದಕ್ಷಿಣೆ ಪಿಡುಗು, ಬಾಲ್ಯ ವಿವಾಹ, ಅಸ್ಪುರ್ಶತೆ ನಿವಾರಣೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಿರೇಮಠ ಕಲಾ ಬಳಗದಿಂದ ಬೀದಿ ನಾಟಕದ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಕಲಾವಿದರಿಗೆ ಶ್ರೀಮಠದ ವತಿಯಿಂದ ಶಾಲು ಹೊದಿಸಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು