ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ 2026 ನೇ ಸಾಲಿನ ಕ್ಯಾಲೆಂಡರ ಹಾಗೂ ಪಾಕೆಟ ಡೈರಿ ಬಿಡುಗಡೆ ಹಾಗೂ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಶ್ರೀಗಳವರ ಗದ್ದುಗೆ ದರ್ಶನ ಪಡೆಯುವುದರ ಪ್ರತ್ಯೇಕ ದರ್ಶನ ವ್ಯವಸ್ಥೆ ಕ್ಯೂ ಸ್ಟ್ಯಾಂಡ್ ಉದ್ಘಾಟನೆ
Date : 30-12-2025
ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ 2026ನೇ ಸಾಲಿನ ಕ್ಯಾಲೆಂಡರ ಮತ್ತು ಪಾಕೆಟ ಡೈರಿಗಳನ್ನು ಬಿಡುಗಡೆಯನ್ನು ಪರಮ ಪೂಜ್ಯ ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಶಾಂತಾಶ್ರಮ ಹುಬ್ಬಳ್ಳಿ, ಪರಮಪೂಜ್ಯ ಶ್ರೀ ಶಂಕರಾನಂದ ಮಹಾಸ್ವಾಮಿಗಳು ಸಿದ್ಧಾರೂಢಸ್ವಾಮಿ ಮಠ, ಚಳಕಾಪುರ, ಪರಮಪೂಜ್ಯ ಶ್ರೀ ಪರಿಪೂರ್ಣಾನಂದ ಮಹಾಸ್ವಾಮಿಗಳು ಸಿದ್ಧಾರೂಢ ಮಠ ಬೆಳಹೊಡ ಇವರುಗಳು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆಯ ಕ್ಯೂ ಸ್ಟ್ಯಾಂಡ್ ಹಾಗೂ ಭಕ್ತರು ಪ್ರಸಾದ ಸ್ವೀಕರಿಸಲಿಕ್ಕೆ ಸರದಿ ಸಾಲಿನ ಛತ್ತನ್ನು ವಿಸ್ತರಣೆ ಮಾಡಿದ್ದನ್ನು ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ವಹಿಸಿದ್ದರು. ಹಿರಿಯ ನಾಗರಿಕರು ಮತ್ತು ಅಂಗವಿಕಲರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಮಂಜುನಾಥ ಮುನವಳ್ಳಿ, ಶ್ರೀ ಬಸವರಾಜ ಕಲ್ಯಾಣಶೆಟ್ಟರ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು.