ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಸಂಗ್ರಹ ಪೆಟ್ಟಿಗೆ ದೇಣಿಗೆ.
Date : 11-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-11.09.2025 ರಂದು ಹುಬ್ಬಳ್ಳಿಯ ಇನ್ನರ್ ವ್ಹೀಲ್ ಕ್ಲಬ್‌ನ ಅಧ್ಯಕ್ಷರಾದ ಶ್ರೀಮತಿ ಸುಷ್ಮಾ ಹಿರೇಮಠ ಇವರು ಶ್ರೀಮಠದ ಹಿಂದಿರುವ ಉದ್ಯಾನ ವನದಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಸಂಗ್ರಹ ಪೆಟ್ಟಿಗೆಯನ್ನು ತಮ್ಮ ಕ್ಲಬ್ ವತಿಯಿಂದ ಶ್ರೀಮಠಕ್ಕೆ ದೇಣಿಗೆಯಾಗಿ ನೀಡಿದರು. ಸಂದರ್ಭದಲ್ಲಿ ಸದರ ಕ್ಲಬ್ ಸದಸ್ಯರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀಮಠದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ, ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.