Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರ ಭೆಟ್ಟಿ
Date : 15-11-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-15.11.2025 ರಂದು ಬಸವ ಸಮಿತಿಯ ಹಿರಿಯ ಅದ್ಯಕ್ಷರಾದ ಸನ್ಮಾನ್ಯ ಶ್ರೀ ಡಾ|| ಅರವಿಂದ ಜತ್ತಿ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಉಭಯ ಶ್ರೀಗಳವರ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮತ್ತು ಭಕ್ತರಾದ ಶ್ರೀ ಲೋಕೇಶ ಕೊರವಿ, ಶ್ರೀ ಜೆ.ಎಲ್.ವಿಶ್ವನಾಥ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು