ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಭಜನಾ ಸಮಾವೇಶ ಉದ್ಘಾಟನಾ ಸಮಾರಂಭ.
Date : 30-04-2025
ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ ಜಯಂತ್ಯೋತ್ಸವದ ನಿಮಿತ್ಯವಾಗಿ ಹತ್ತನೇ ವರ್ಷದ ಭಜನಾ ಸಮಾವೇಶದ ಉದ್ಘಾಟನಾ ಸಮಾರಂಭವನ್ನು ನೆರವೇರಿಸಲಾಯಿತು. ಹಿರಿಯ ಧರ್ಮದರ್ಶಿಗಳು ಹಾಗೂ ನ್ಯಾಯವಾದಿಗಳಾದ ಶ್ರೀ ಕೆ.ಎಲ್.ಪಾಟೀಲ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯ ಮಟ್ಟದ ಭಜನಾ ಸಮಾವೇಶದ ಕಾರ್ಯಾಧ್ಯಕ್ಷರಾದ ಶ್ರೀ ಶಾಮಾನಂದ ಬಾ. ಪೂಜೇರಿ ಇವರು ಎಲ್ಲರನ್ನು ಸ್ವಾಗತಿಸಿದರು. ದಿವ್ಯ ಸಾನಿದ್ಯವನ್ನು ಪರಮ ಪೂಜ್ಯ ಶ್ರೀ ಆತ್ಮಾನಂದ ಮಹಾಸ್ವಾಮಿಗಳು ವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಇವರು ವಹಿಸಿದ್ದರು. ರಾಜ್ಯ ಮಟ್ಟದ ಭಜನಾ ಸಮಾವೇಶದ ಅಧ್ಯಕ್ಷರಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಇವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀ ಮಠದ ಮ್ಯಾನೇಜರ್ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗದವರು ಹಾಗೂ ಭಕ್ತರು ಹಾಜರಿದ್ದರೆಂದು ಶ್ರೀಮಠದ ಪ್ರಕಟಣೆ ಮೂಲಕ ತಿಳಿಸಲಾಗಿದೆ.