Shri Siddharoodha Swamiji Math Trust Committee

Hubballi

www.srisiddharoodhaswamiji.in

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
Date : 31-03-2026
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 31.03.2026 ರಂದು ನಡೆದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆಯನ್ನು ಧರ್ಮದರ್ಶಿಗಳಾದ ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ ಇವರು ವಹಿಸಿಕೊಂಡು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇರ್‌ಮನ್ನರಾಗಿ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ಆಯ್ಕೆಯಾದರು, ವೈಸ್ ಚೇರ್‌ಮನ್ನರಾಗಿ ಶ್ರೀಮತಿ ಗೀತಾ ಟಿ. ಕಲಬುರ್ಗಿ ಇವರು ಆಯ್ಕೆಯಾದರು, ಗೌರವ ಕಾರ್ಯದರ್ಶಿಗಳಾಗಿ ವಿನಾಯಕ ಅ. ಘೋಡ್ಕೆ ಇವರು ಆಯ್ಕೆಯಾದರು, ಇವರುಗಳನ್ನು ದಿನಾಂಕ:-31.03.2026 ರಿಂದ 01.04.2027 ರ ಅವಧಿಗಾಗಿ ಆಯ್ಕೆ ಮಾಡಲಾಯಿತು, ಆಯ್ಕೆ ಸಂದರ್ಭದಲ್ಲಿ ಧರ್ಮದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ವೀರಪ್ಪ ವೀ. ಮಲ್ಲಾಪೂರ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ವ್ಹಿ.ಡಿ.ಕಾಮರಡ್ಡಿ, ಶ್ರೀ ವಸಂತ ವಾಯ್. ಸಾಲಗಟ್ಟಿ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಉಪಸ್ಥಿತರಿದ್ದರು