ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ವತಿಯಿಂದ ವಾಣಿಜ್ಯ ಸಂಕಿರ್ಣ ಕಟ್ಟಡದ ಅಡಿಗಲ್ಲು ಸಮಾರಂಭ.
Date : 15-05-2026
ಶಿವಾವತಾರಿ ಜಗದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ ಶ್ರೀಮಠದಲ್ಲಿ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಸ್ಟೇಷನ್ ರಸ್ತೆಯಲ್ಲಿರುವ (ಜ್ಯೂಯಲುಕಾಸ್ ಗೋಲ್ಡ್ ಶೋ ರೂಮ್ ಎದುರಿಗೆ) ಶ್ರೀಮಠದ ಜಾಗೆಯಲ್ಲಿ ವಾಣಿಜ್ಯ ಸಂಕಿರ್ಣ ಕಟ್ಟಡದ ಅಡಿಗಲ್ಲು ಸಮಾರಂಭವು ದಿನಾಂಕ:-೧೫-೦೫-೨೦೨೬ ರಂದು ಸಾಯಂಕಾಲ:-೦೪-೦೦ ಘಂಟೆಗೆ ನೆರವೇರಿಸಲಾಯಿತು. ಉದ್ಘಾಟಕರಾಗಿ ಶ್ರೀಮಠದ ಮುಖ್ಯ ಆಡಳಿತಾಧಿಕಾರಿಗಳು, ಹಾಗೂ ಧಾರವಾಡ ಜಿಲ್ಲಾ ಪ್ರಧಾನ ವ ಸತ್ರ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ ಇವರು ನೆರವೇರಿಸಿದರು, ದಿವ್ಯಸನ್ನಿದಾನವನ್ನು ಶ್ರೋ.ಬ್ರ.ಸದ್ಗುರು ಶ್ರೀ ದಯಾನಂದ ಸರಸ್ವತಿ ಮಹಾಸ್ವಾಮಿಗಳು, ಶ್ರೀ ಪೂರ್ಣಾನಂದ ಆಶ್ರಮ, ಕಾಡರಕೊಪ್ಪ ಇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ, ವಂದನಾರ್ಪಣೆಯನ್ನು ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರುಗಳು ನೆರವೇರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ವಸಂತ ವಾಯ್. ಸಾಲಗಟ್ಟಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ಡಿ.ಕಾಮರಡ್ಡಿ ಉಪಸ್ಥಿತರಿದ್ದರು.