Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ದಿನೇಶ ಗುಂಡೂರಾವ್ ಇವರ ಭೆಟ್ಟಿ.
Date : 26-04-2026
ದಿನಾಂಕ:-26.04.2026 ರಂದು ಸನ್ಮಾನ್ಯ ಶ್ರೀ ದಿನೇಶ ಗುಂಡೂರಾವ್, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ ಇವರು ಶ್ರೀಮಠದಕ್ಕೆ ಭೇಟಿ ಕೊಟ್ಟು ಉಭಯ ಶ್ರೀಗಳವರ ದರ್ಶನ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರ ಮೇಲ್ಮನೆ ಸಭಾದ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ, ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯಕ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ಡಾ|| ಸತೀಶ ಹೊನಿಕೇರಿ, ಶ್ರೀ ಮೋಹನ ಹೆಗಡೆ, ಸಿ.ಇ.ಓ. ಸಂಯುಕ್ತ ಕರ್ನಾಟಕ ದಿನಪತ್ರಿಕೆ ಹಾಗೂ ಶ್ರೀಮಠದ ಸಿಬ್ಬಂದಿಗಳು ಮತ್ತು ಭಕ್ತರು ಉಪಸ್ಥಿತರಿದ್ದರು.