ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಆವರಣದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ.
Date : 23-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ದಿನಾಂಕ:-23.09.2025 ರಂದು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರವಾಡ ಪಶ್ಚಿಮ ಮತ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ವಿಧಾನ ಸಭೆ ವಿರೋಧ ಪಕ್ಷದ ಉಪ ನಾಯಕರಾದ ಸನ್ಮಾನ್ಯ ಶ್ರೀ ಅರವಿಂದ ಬೆಲ್ಲದ ಇವರು ನೆರವೇರಿಸಿದರು. ಅಧ್ಯಕ್ಷತೆಯನ್ನು ಟ್ರಸ್ಟ್ ಕಮೀಟಿಯ ಚೇರ್ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ವಹಿಸಿದ್ದರು.
ಈ ಸಂದರ್ಭದಲ್ಲಿ ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಸಿದ್ಧನಗೌಡ ಪಿ. ಪಾಟೀಲ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಕುಮಾರಬಾಬು ಬೆಕ್ಕೇರಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.